ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸಿಎಂ ಟಗರು. ಟಗರು ಯಾವತ್ತಿಗೂ ಟಗರೇ. ಭಯ ಬೀಳೋ ಪ್ರಶ್ನೆನೇ ಇಲ್ಲ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹುಲಿ ಇದ್ದಂತೆ. ಸಿದ್ದರಾಮಯ್ಯ ಜೊತೆ ಹೈಕಮಾಂಡ್, ಶಾಸಕರು, ಜನರಿದ್ದಾರೆ. ಸಿದ್ದರಾಮಯ್ಯ ಬಂದು ನಿಂತರೆ ಸಾವಿರಾರು ಜನ ಬಂದು ಕೂರುತ್ತಾರೆ. ಬಿಜೆಪಿಯವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.