ಹೊಸದಿಗಂತ ವರದಿ, ಅಂಕೋಲಾ:
ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಮ್ಮ ದೇಶ ನಮ್ಮ ಮಣ್ಣು ಕಾರ್ಯಕ್ರಮದ ಮೂಲಕ ಅತ್ಯಂತ ಹಿಂದುಳಿದ ಗುಡ್ಡಗಾಡು ಪ್ರದೇಶವಾದ ಡೋಂಗ್ರಿಯ ಮಣ್ಣನ್ನು ಸಂಗ್ರಹಿಸಿ ದೆಹಲಿಗೆ ಕಳಿಸುವ ವ್ಯವಸ್ಥೆ ಮಾಡಲಾಯಿತು.
ಶಕ್ತಿ ಕೇಂದ್ರದ ಅಧ್ಯಕ್ಷರು ಡೋಂಗ್ರಿ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹ ಮಾಡಲಾದ ಮಣ್ಣನ್ನು ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ ಅವರಿಗೆ ಹಸ್ತಾಂತರಿಸಿ ಜಿಲ್ಲಾಧ್ಯಕ್ಷರ ಮುಖಾಂತರ ದೇಹಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕಿ ರೂಪಾಲಿ ನಾಯ್ಕ ನಮ್ಮ ನೆಲದ ಮಣ್ಣು ದೆಹಲಿಗೆ ಕಳುಹಿಸುತ್ತಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗುವ ಕ್ಷಣವಾಗಿದ್ದು ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸಗಳು ನಡೆಯಬೇಕಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಸುದ್ದಿ ವಾಹಿನಿಯ ಮುಖ್ಯಸ್ಥ ಹರಿಪ್ರಕಾಶ ಕೋಣಿಮನೆ, ಗ್ರಾಮ ಪಂಚಾಯತ್ ಅಧ್ಯಕ್ಷ ವಿನೋದ ಭಟ್ಟ ಮೊದಲಾದವರು ಉಪಸ್ಥಿತರಿದ್ದರು.