‘ಅಸುರ ಶಕ್ತಿ’ಯ ವಿರುದ್ಧ ನಮ್ಮ ಹೋರಾಟ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ನಮ್ಮ ಹೋರಾಟ ‘ಅಸುರ ಶಕ್ತಿ’ಯ ವಿರುದ್ಧ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದ್ವೇಷದಿಂದ ತುಂಬಿದ ಅಸುರ ಶಕ್ತಿ’ ವಿರುದ್ಧ ನಮ್ಮ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.

‘ಭಾರತ ಜೋಡೊ ನ್ಯಾಯ ಯಾತ್ರೆ’ ಸಮಾರೋಪ ಸಭೆಯಲ್ಲಿ ನಾವು ‘ಶಕ್ತಿ’ ವಿರುದ್ಧ ಹೋರಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯು ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವಾಕ್ಸಮರಕ್ಕೆ ಕಾರಣವಾಗಿತ್ತು.

ಬಿಜೆಪಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದರು. ಪ್ರತಿಯೊಬ್ಬ ತಾಯಿ ಮತ್ತು ಹೆಣ್ಣು ಮಗಳು ‘ಶಕ್ತಿ’ಯ ರೂಪ. ಅವರನ್ನು ನಾನು ಆರಾಧಿಸುತ್ತೇನೆ. ಅವರ ರಕ್ಷಣೆಗಾಗಿ ನನ್ನ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧವಿದ್ದೇನೆ ಎಂದು ಹೇಳಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!