ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತರಿಗೆ ಖಾತ್ರಿಯಾಗಿ ನೀಡಬೇಕಿದ್ದ ಹಣ ವರ್ಗಾವಣೆ ಮಾಡುವ ಮೂಲಕ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಎಸ್ ಟಿ ಅಭಿವೃದ್ಧಿ ನಿಗಮ, ಎಸ್ ಇಎಸ್ ಪಿ, ಟಿಎಸ್ ಪಿ ಯೋಜನೆಗಳಡಿ ದಲಿತರಿಗೆ ಮೀಸಲಿಟ್ಟಿದ್ದ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿಯಾಗಿ ವರ್ಗಾವಣೆ ಮಾಡಿದೆ.
ಇದೇ ವೇಳೆ ಲೋಕಸಭೆ ಚುನಾವಣೆ ವೇಳೆ ವಾಲ್ಮೀಕಿಯಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದರು.