ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನರನ್ನ ಲೂಟಿ ಮಾಡುವ ಈ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಟಿ.ಬಿ ಸೋಂಕಿತರಿಗೆ ನ್ಯೂಟ್ರಿಷನಲ್ ಕಿಟ್‌ಗಳ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶೋಭಾ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಾಲಿನ ದರ, ವಿದ್ಯುತ್ ದರ, ನೋಂದಣಿ ಶುಲ್ಕ ಹೆಚ್ಚಳ ಮಾಡಿದ್ದಾರೆ. ಸರ್ಕಾರದಲ್ಲಿ ಹಣ ಇಲ್ಲ, ಇರುವ ಹಣ ಗ್ಯಾರಂಟಿಗಳಿಗೆ ಕೊಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಶೋಭಾ ಕಿಡಿಕಾರಿದ್ದಾರೆ.