ಹೊಸ ದಿಗಂತ ಡಿಜಿಟಲ್ ಡೆಸ್ಕ್:
‘ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವೋಟಿಗಾಗಿ ರಾಮಮಂದಿರ ಎಂಬ ಸಚಿವ ಡಿ ಸುಧಾಕರ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ‘ರಾಮಮಂದಿರ ನಿರ್ಮಾಣಕ್ಕೆ ನಮ್ಮ ಬೆಂಬಲ’ ಎಂದು ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ನಮ್ಮ ವಿರೋಧವಿಲ್ಲ. ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ನಾವು ರಾಮಮಂದಿರದ ಪರವಾಗಿದ್ದೇವೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಪರವಾಗಿ ತಮ್ಮ ಸರ್ಕಾರವಿದ್ದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.
ಈ ಮಧ್ಯೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿಲ್ಲ, ಆಹ್ವಾನ ಬಂದರೆ ಆಮೇಲೆ ನೋಡೋಣ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.