October 14, 2026
Wednesday, October 14, 2026
spot_img

ಮೂಲಭೂತ ಸೌಕರ್ಯ ಒದಗಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧ:‌ ಸಚಿವ ವಿಜಯಾನಂದ ಕಾಶಪ್ಪನವರ

ಹೊಸದಿಗಂತ ವರದಿ ಬಾಗಲಕೋಟೆ:

ಸಂತ್ರಸ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.

ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದ ಅಗ್ನಿ ಅವಘಡದಿಂದ ಉಂಟಾದ ಹಾನಿಯನ್ನು ವಿಕ್ಷೀಸಿ ಮಾತನಾಡಿದ ಅವರು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಸೆಪ್ಟೆಂಬರ್ 4 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕೂಡಲಸಂಗಮಕ್ಕೆ ಭೇಟಿ ನೀಡಲಿದ್ದಾರೆ. ಅವರ ಗಮನಕ್ಕೆ ತಂದು ಇದ್ದಲಗಿ ಗ್ರಾಮಕ್ಕೂ ಭೇಟಿ ನೀಡಲು ಮನವಿ ಮಾಡುವುದಾಗಿ ತಿಳಿಸಿದರು. ಸಂತ್ರಸ್ತರಿಗೆ ನೀಡಿದ ಜಾಗದಲ್ಲಿ ಶೆಡ್ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Must Read