ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮೇಲೆ ನಮ್ಮ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಕೇತಗಾನಹಳ್ಳಿ ಜಮೀನು ಸರ್ವೇ ರಾಜಕೀಯ ಪ್ರೇರಿತ ಎಂಬ ಕುಮಾರಸ್ವಾಮಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಸರ್ವೇ ಕೋರ್ಟ್ ಆದೇಶದ ಮೇರೆಗೆ ನಡೆಯುತ್ತಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಮಾಡ್ತಿರೋದಲ್ಲ. ಅಧಿಕಾರ ದುರ್ಬಳಕೆ ಮಾಡಿರುವುದು ಕುಮಾರಸ್ವಾಮಿಯವರು, ಸರ್ಕಾರವಲ್ಲ. ಹಾಗಾದ್ರೆ ಕೋರ್ಟ್ ಸರ್ವೇ ಮಾಡಿ ಎಂದು ಹೇಳಿರುವುದು ರಾಜಕೀಯನಾ? ಎಂದು ತಿರುಗೇಟು ನೀಡಿದ್ದಾರೆ.