ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಹಿಂದಿನ ಬಿಜೆಪಿ ಸರ್ಕಾರ ಸಾಲ ಮಾಡಿ ತುಪ್ಪ ತಿಂದಿದ್ದಾರೆ,, ಅವರು ಮಾಡಿದ ಸಾಲವನ್ನು ತಮ್ಮ ಸರ್ಕಾರ ತೀರಿಸುತ್ತಿದೆ ಎಂದು ಹೇಳಿದರು.
70 ಪರ್ಸೆಂಟ್ ಕಮೀಶನ್ ಸರ್ಕಾರ ಎಂದು ದೆಹಲಿಯಿಂದ ಬಂದಿರುವ ಕುಮಾರಸ್ವಾಮಿ ಹೇಳಿದ್ದಾರೆ. 60 ಪರ್ಸೆಂಟ್ ಸರ್ಕಾರ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಕಮೀಶನ್ ಯಾರು ತೆಗೆದುಕೊಂಡಿದ್ದಾರೆ ಎಂಬುದನ್ನು ಅವರೇ ಹೇಳಬೇಕು. ತನಿಖೆ ಮಾಡಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಸರ್ಕಾರ ಹೇಳಿದೆ ಮತ್ತು ಘಟನೆಗೆ ಅವರೇ ಹೊಣೆ ಎಂದು ಹೇಳಿದರು.
ದೂರುಗಳನ್ನು ಅವರು ನಾಗಮೋಹನ್ ದಾಸ್ ಆಯೋಗಕ್ಕೆ ಸಲ್ಲಿಸಲಿ, ಸರ್ಕಾರ ತನಿಖೆ ನಡೆಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.