ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಸರ್ಕಾರ ಸುರಕ್ಷಿತವಾಗಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಸ್ವಾಮೀಜಿ, ಗುರೂಜಿಗಳು ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹೊತ್ತಿನಲ್ಲಿ ಡಿಕೆಶಿ ಸಿಎಂ ಆಗುತ್ತಾರೆ ಎಂಬ ವಿನಯ್ ಗುರೂಜಿಯವರ ಭವಿಷ್ಯವಾಣಿಗೆ ಪ್ರತಿಕ್ರಿಯಿಸಿದರು. ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ. ನಮ್ಮ ಸರ್ಕಾರದ ವಿಚಾರದಲ್ಲಿ ತಮ್ಮ ಯಾವ ಹೇಳಿಕೆ ಬೇಡ. ನಮ್ಮ ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಯಾರೂ ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಹೇಳಿದ್ದಾರೆ.