Sunday, December 3, 2023

Latest Posts

ನಮ್ಮ ಸರ್ಕಾರ ಗಟ್ಟಿಯಿದೆ, ಯಾವ ಕುತಂತ್ರವೂ ಕೆಲಸ ಮಾಡೋದಿಲ್ಲ: ಆರ್.ಬಿ.ತಿಮ್ಮಾಪುರ

ಹೊಸದಿಗಂತ ವರದಿ ಬಾಗಲಕೋಟೆ:

ನಮ್ಮ ಸರ್ಕಾರ ಗಟ್ಟಿಯಿದೆ, ಯಾವ ಕುತಂತ್ರವೂ ಕೆಲಸ ಮಾಡೋದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಲ್ಲರೂ ಒಗ್ಗಟ್ಟಾಗಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ ಎಂದರು.

ಕೆಲವರು ನಾಯಕರ ಅಭಿಮಾನದಿಂದ ಅವರ ಸಿಎಂ ಆಗಬೇಕು ಇವರ ಸಿಎಂ ಆಗಬೇಕು ಎಂದು ಹೇಳುವುದು ತಪ್ಪಲ್ಲ. ಅವರ ಅಭಿಪ್ರಾಯ ಶಾಸಕಾಂಗ ಪಕ್ಷದ ಅಭಿಪ್ರಾಯವಾಗುವುದಿಲ್ಲ. ಅಲ್ಲೊಬ್ಬ ಇಲ್ಲೊಬ್ಬ ಹೇಳಿಕೆ ಗೌಣವಾಗಲಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!