ನಮ್ಮ ಸರ್ಕಾರ ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಹೊಸದಾಗಿ ಯಾವುದೇ ಮದ್ಯದಂಗಡಿಯನ್ನು ತೆರೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವರು ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವ ಕುರಿತಾಗಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಈಗಿರುವ ಮದ್ಯದಂಗಡಿಗಳ ಹೊರತಾಗಿ ನಮ್ಮ ಸರ್ಕಾರವು ಯಾವುದೇ ಹೊಸ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದರು.

ಕಳೆದ ಕೆಲವು ದಿನಗಳ ಹಿಂದೆ ಸಚಿವರೊಬ್ಬರು ಗ್ರಾಮ ಪಂಚಾಯಿತಿಗಳಲ್ಲಿ ಮದ್ಯದಂಗಡಿ ತೆರೆಯಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಮೂರು ಸಾವಿರ ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೊಸ ಮದ್ಯ ಮಾರಾಟ ಮಳಿಗೆ ತೆರೆಯಲಾಗುತ್ತದೆ. ಸೂಪರ್ ಮಾರ್ಕೆಟ್ ಗಳಲ್ಲೂ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಲು ಪ್ರಸ್ತಾವನೆ ತಯಾರಾಗಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತಾಗಿ ಇಂದು ಸಿಎಂ ಉತ್ತರ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!