ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಕುರಿತು ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮಹಾರಾಷ್ಟ್ರ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಎನ್‌ಡಿಎಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಹಾರಾಷ್ಟ್ರದ ನನ್ನ ಸಹೋದರಿಯರು, ಸಹೋದರರು ಹಾಗೂ ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗಾಗಿ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ವಿವಿಧ ಉಪಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ವಿವಿಧ ರಾಜ್ಯಗಳ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪ್ರತಿಯೊಬ್ಬ ಎನ್‌ಡಿಎ (NDA) ಕಾರ್ಯಕರ್ತರ ಪ್ರಯತ್ನಗಳಿಗಾಗಿ ನಾನು ಹೆಮ್ಮೆಪಡುತ್ತೇನೆ. ಅವರು ಕಷ್ಟಪಟ್ಟು ಕೆಲಸ ಮಾಡಿ ಜನರ ನಡುವೆ ಹೋಗಿ ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ವಿವರಿಸಿದರು.
ನಮಗೆ ಬೆಂಬಲ ನೀಡಿದ ಜಾರ್ಖಂಡ್ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯಕ್ಕಾಗಿ ದುಡಿಯಲು ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ರಾಜ್ಯದಲ್ಲಿ ಜೆಎಂಎಂ ಅಭೂತಪೂರ್ವ ಗೆಲುವು ಸಾಧಿಸಿದೆ. ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.