Friday, September 29, 2023

Latest Posts

ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಹೆಗ್ಗಳಿಕೆಗೆ ಪಾತ್ರವಾಯಿತು ನಮ್ಮ ಭಾರತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ಹೊಸ ದಾಖಲೆ ಬರೆದಿದೆ.

ಸೌತ್ ಆಫ್ರಿಕಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಇಸ್ರೋ ನೇರ ಪ್ರಸಾರದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ಯಶಸ್ವಿ ಲ್ಯಾಂಡಿಂಗ್‌ಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

5.44ಕ್ಕೆ ಇಸ್ರೋ ವಿಕ್ರಮ್ ಲ್ಯಾಂಡರ್ ಇಳಿಕೆ ಪ್ರಕ್ರಿಯೆ ಆರಂಭಿಸಿತು. ಹಂತ ಹಂತವಾಗಿ ವೇಗ ತಗ್ಗಿಸಿದ ಇಸ್ರೋ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಇಳಿಸಿ ಇತಿಹಾಸ ರಚಿಸಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ವಿಶ್ವದ ಮೊದಲ ದೇಶ ಎಂಬ ದಾಖಲೆಗೆ ಭಾರತ ಪಾತ್ರವಾಗಿದೆ. ಜತೆಗೆ ಚಂದ್ರನ ಮೇಲೆ ಯಶಸ್ವಿಯಾಗಿ ನೌಕೆ ಇಳಿಸಿ ಅಧ್ಯಯನ ಕೈಗೊಂಡ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ , ಹಾಗೂ ಚಂದ್ರನಿಗೆ ಕಾಲಿಟ್ಟ ವಿಶ್ವದ 4ನೇ ರಾಷ್ಟ್ರ ಎಂಬ ಹೊಸ ಇತಿಹಾಸವನ್ನು ಭಾರತ ಬರೆದಿದೆ. ಈವರೆಗೆ ಅಮೆರಿಕ, ಚೀನಾ ಹಾಗೂ ಸೋವಿಯತ್‌ ಒಕ್ಕೂಟಗಳು ಈ ಮಾತ್ರ ಈ ಸಾಧನೆ ಮಾಡಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!