ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋಗೆ ಬಸವಣ್ಣ ಎಂದು ಹೆಸರಿಡೋದು ಸೂಕ್ತ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಟ್ಟಿದ್ದೇವೆ, ಬಸವೇಶ್ವರರು 12ನೇ ಶತಮಾನದಲ್ಲಿ ಸಮಾನತೆ ಹಾಗೂ ಅನುಭವ ಮಂಟಪದ ಪರಿಕಲ್ಪನೆ ನೀಡಿದವರು, ಇವರ ಹೆಸರನ್ನು ಮೆಟ್ರೋಗೆ ಇಡಬೇಕು ಎಂದಿದ್ದಾರೆ.
ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ, ನಮ್ಮ ಮೆಟ್ರೋಗೆ ಬಸವಣ್ಣ ಎಂದು ಹೆಸರಿಡಲು ಆಗ್ರಹಿಸುತ್ತೇನೆ ಎಂದಿದ್ದಾರೆ.