ಹೊಸದಿಗಂತ ಡಿಜಿಟಲ್ ಡೆಸ್ಕ್:
ರಜೆಗಳನ್ನು ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಚೇರಿ, ಕೆಲಸಗಳಿಗೆ ಹೋಗಲೆಂದು ಮೆಟ್ರೋ ನಿಲ್ದಾಣಗಳಿಗೆ ಬಂದ ಪ್ರಯಾಣಿಕರು ಮೆಟ್ರೋಗೆ ಕಾದು ಕಾದು ಹೈರಾಣಾಗಿದ್ದಾರೆ.
ಬೆಳಗ್ಗೆ ಪೀಕ್ ಅವರ್‌ನಲ್ಲಿ ನಮ್ಮ ಮೆಟ್ರೋ ರೈಲುಗಳು 10 ನಿಮಿಷದ ಅಂತರದಲ್ಲಿ ಸಂಚರಿಸಿದ ಪರಿಣಾಮ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು. ಮೆಟ್ರೋ ರೈಲಿನಲ್ಲಿ ಸಂಚರಿಸಲು ಪ್ರಯಾಣಿಕರು ಒದ್ದಾಡಬೇಕಾಗಿ ಬಂತು. ಮೆಟ್ರೋ ನಿಲ್ದಾಣಗಳಲ್ಲಿ ಹಾಗೂ ರೈಲುಗಳಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು. ನಮ್ಮ ಮೆಟ್ರೋ ಈ ಅವ್ಯವಸ್ಥೆಯ ಬಗ್ಗೆ ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೆಟ್ರೋ ರೈಲು ಫ್ರೀಕ್ವೆನ್ಸಿ ಕಡಿಮೆಯಾದ ಪರಿಣಾಮ ದೈನಂದಿನ ಕೆಲಸ ಕಾರ್ಯಗಳಿಗೆ ಹೋಗುವವರಿಗೆ, ಕಚೇರಿಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಯಿತು. ಮೆಜೆಸ್ಟಿಕ್, ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿನ ಕೆಲವು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
#Nammametro Update
Massive Chaos at Majestic Metro Station Due to Delayed TrainsMassive crowding and confusion were witnessed at Majestic Metro Station today as metro trains were running behind schedule. With platforms packed and no clear communication from authorities,… pic.twitter.com/DZxANsAho1
— Karnataka Portfolio (@karnatakaportf) April 14, 2025