ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಈಗಾಗಲೇ ನಮ್ಮ ಮೆಟ್ರೋ ದರ ಏರಿಕೆಗಾಗಿ ಪ್ರಸ್ತಾವನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ. ಅನುಮತಿ ಬಂದ ಬಳಿಕ ನಿರ್ಧರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮೆಟ್ರೋ ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರದಿಂದ ಉತ್ತರ ಬರಬೇಕು, ಉತ್ತರ ಬಂದ್ಮೇಲೆ ನಾವು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಇನ್ನೂ ಇದೇ ವೇಳೆ ಕಾವೇರಿ ನೀರಿನ ದರ ಏರಿಕೆ ವಿಚಾರವಾಗಿ ಮಾತನಾಡಿ, ಸರ್ಕಾರಕ್ಕೆ ಬೆಲೆ ಏರಿಕೆಯ ಪ್ರಸ್ತಾವನೆಯನ್ನು ಜಲಮಂಡಳಿಯವರು ಸಲ್ಲಿಸಿದ್ದಾರೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಬೆಲೆ ಏರಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.