ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರಿಂದ ದೇಣಿಗೆ ಇಟ್ಟಿದ್ದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಈ ಕಾರಣದಿಂದಾಗಿ ನಮ್ಮ ಪಕ್ಷ ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಚುನಾವಣೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು, ಆದರೆ ಇದೀಗ ಬಿಜೆಪಿ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದಾಯ ತೆರಿಗೆ ಮೂಲಕ ಪಕ್ಷಕ್ಕೆ ಭಾರೀ ದಂಡ ಹಾಕುತ್ತಿದೆ. ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಹೊರತಾಗಿಯೂ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಜನರು ದೇಣಿಗೆಯಾಗಿ ನೀಡಿದ್ದು ನಮ್ಮ ಪಕ್ಷದ ಹಣ, ಅದನ್ನು ಖರ್ಚು ಮಾಡಲು ಬಿಜೆಪಿ ಬಿಡುತ್ತಿಲ್ಲ. ಈಗ ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣ ಇಲ್ಲ. ಜನ ಇವುಗಳನ್ನು ಗಮನಿಸಬೇಕು, ನಮ್ಮ ಪಕ್ಷದ ಕೈ ಹಿಡಿಯಬೇಕು ಎಂದು ಮನವಿ ಮಾಡಿದ್ದಾರೆ.