ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ: ಮಧು ಬಂಗಾರಪ್ಪ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂರು ಉಪಚುನಾವಣೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿಯಲ್ಲಿ ನಾನು ಪ್ರಚಾರ ಮಾಡಿದ್ದೇನೆ. ಎರಡು ಕ್ಷೇತ್ರದಲ್ಲಿ ವಾತಾವರಣ ಚೆನ್ನಾಗಿದೆ ಎಂದರು.

ಯೋಗೇಶ್ವರ್ ಸ್ಥಳೀಯ ಚನ್ನಪಟ್ಟಣದಲ್ಲಿ ಕೆಲಸ ಮಾಡಿದ್ದಾರೆ. ಜನರು ಅವರನ್ನು ನಂಬುತ್ತಾರೆ. ಯೋಗೇಶ್ವರ್ ಕಾಂಗ್ರೆಸ್ ಸೇರುವುದಕ್ಕೆ ಯಾರ ವಿರೋಧವೂ ಇಲ್ಲ. ಯೋಗೇಶ್ವರ್ ಗೆಲ್ಲುವುದು ಖಚಿತ. ಗೆದ್ದರೂ ಸೋತರೂ ಜನರ ಪರವಾಗಿ ನಿಲ್ಲುವವರನ್ನು ಜನ ಒಪ್ಪಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಜನ ನೂರಕ್ಕೆ ನೂರು ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!