ನಮ್ಮ ಜನ ಹಾವುಗಳನ್ನು ಬಿಡಲ್ಲ: ಅಕ್ರಮವಾಗಿ ಸಾಗಿಸುತ್ತಿದ್ದ10 ಅನಕೊಂಡ ಹಾವುಗಳು ಜಪ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿದೇಶದಿಂದ 10 ಅನಕೊಂಡ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬಂಧಿಸಿದ್ದಾರೆ.

ಬ್ಯಾಂಕಾಕ್‌ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರ ಲಗೇಜ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದರು. ಈ ವೇಳೆ ಪ್ರಯಾಣಿಕರೊಬ್ಬರ ಲಗೇಜ್ ತಪಾಸಣೆ ನಡೆಸಿದಾಗ ಹತ್ತು ಅನಕೊಂಡಗಳು ಪತ್ತೆಯಾಗಿವೆ.

ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿರುವಾಗ ಅಧಿಕಾರಿಗಳು ತಕ್ಷಣವೇ ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಂಡರು. ಕಸ್ಟಮ್ಸ್ ಅಧಿಕಾರಿಗಳು ಅನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆರೋಪಿ ವಿರುದ್ಧ ವನ್ಯಜೀವಿ ಕಳ್ಳಸಾಗಣೆ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!