ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹಳ ದಿನಗಳ ಕನಸು, ಬೆಂಗಳೂರಿನಯೆಲ್ಲೋ ಮೆಟ್ರೋ ಲೈನ್ ಅನ್ನು ಇದೇ ಆ. 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯೆಲ್ಲೋ ಲೈನ್ ಕನಿಷ್ಠ 8 ಲಕ್ಷ ಜನರಿಗೆ ಅನುಕೂಲ ಆಗಲಿದೆ. ಪ್ರಧಾನಿಯವರು ಬೆಳಗ್ಗೆ ಬೆಂಗಳೂರಿಗೆ ಬರಲಿದ್ದು, ಹೆಲಿಕಾಪ್ಟರ್ ಮೂಲಕ ಮೇಖ್ರಿ ವೃತ್ತದ ಬಳಿ ಇರುವ ಮಿಲಿಟರಿ ಮೈದಾನಕ್ಕೆ ಆಗಮಿಸುವರು. ಬಳಿಕ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮೂಲಕ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ಗೆ ಬಂದು ತಲುಪುವರು. ಅಲ್ಲಿ ಬೆಂಗಳೂರು-ಬೆಳಗಾವಿ ನಡುವಿನ ವಂದೇ ಭಾರತ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ವಿವರಿಸಿದ್ದಾರೆ.