ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆಗೆ ಡಿಎಂಕೆ ಸಂಸದೆ ಕನಿಮೋಳಿ ವಿರೋಧಿಸಿದ್ದು, ಲೋಕಸಭೆಯಲ್ಲಿ ಸಂಸದೀಯ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.
ತ್ರಿಭಾಷಾ ಸೂತ್ರದ ಕುರಿತು ತಮಿಳುನಾಡು ಸರ್ಕಾರದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ ನಡೆಸಿದ್ದಾರೆ. ಇದೀಗ ಇದನ್ನು ವಿರೋಧಿಸಿದ ಡಿಎಂಕೆ ಸಂಸದೆ ಕನಿಮೋಳಿ ಡಿಎಂಕೆ ಸರ್ಕಾರವು ಎನ್ಇಪಿ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ನೀತಿಯನ್ನು ಸಂಪೂರ್ಣವಾಗಿ ಸ್ವೀಕರಿಸಲು ನಿರಾಕರಿಸಿದೆ ಎಂದು ಹೇಳಿದರು.
ನಾವು ನಮ್ಮ ನಿಲುವನ್ನು ಬದಲಾಯಿಸಿಲ್ಲ. ಸಚಿವರು ನಮ್ಮನ್ನು ಸುಳ್ಳುಗಾರರು ಮತ್ತು ಅಸಭ್ಯರು ಎಂದು ಕರೆದರು. ಅವರು ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ನಾವು ಯಾವುದೇ ಭಾಷೆಯ ವಿರೋಧಿಯಲ್ಲ, ಆದರೆ ನೀವು ನಮ್ಮನ್ನು ಅಸಭ್ಯ ಎಂದು ಕರೆಯಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ NEP ಅನುಷ್ಠಾನದ ಬಗ್ಗೆ ವಿವಾದದ ನಡುವೆ ಪ್ರಧಾನ್ ಅವರ ಹೇಳಿಕೆಗಳನ್ನು ಹಲವಾರು ವಿರೋಧ ಪಕ್ಷದ ಸದಸ್ಯರು ಖಂಡಿಸಿದ ನಂತರ, ಲೋಕಸಭೆಯನ್ನು ಸ್ವಲ್ಪ ಸಮಯದವರೆಗೆ ಮುಂದೂಡಲಾಯಿತು.