ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಬೆಂಗಳೂರಿಗೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬರ ಪರಿಹಾರದ ಹಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದು ರಾಜಕೀಯ ಸ್ಟಂಟ್. ಈ ರೀತಿಯ ರಾಜಕೀಯ ಸ್ಟಂಟ್ ಬಿಟ್ಟು ಸಿದ್ದರಾಮಯ್ಯ ಕೆಲಸ ಮಾಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮ ತೆರಿಗೆ ನಮ್ಮ ಹಣ ಎನ್ನುವುದು ರಾಜಕೀಯ ಡ್ರಾಮಾ.ಸರ್ಕಾರ ಇಂಥ ಡ್ರಾಮಾ ಬಿಟ್ಟು ಕೆಲಸ ಮಾಡಬೇಕು ಎಂದು ಹೇಳಿದರು.
ಶಸ ಚಿಕಿತ್ಸೆ ಬಗ್ಗೆ ಮಾತನಾಡಿ, ಇದೊಂದು ಪುನರ್ಜನ್ಮ ಎಂದೇ ಹೇಳಬಹುದು. ನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು. ಅಭಿಮಾನಿಗಳು, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡುತ್ತೇನೆ ಎಂದು ಹೇಳಿದರು.