‘ನಮ್ಮ ನೀರು, ನಮ್ಮ ಹಕ್ಕು’: ಕಾವೇರಿ ಆದೇಶದ ವಿರುದ್ಧ ಮಂಡ್ಯದಲ್ಲಿ ಹೋರಾಟ

ಹೊಸದಿಗಂತ ವರದಿ ಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟೆಯಿಂದ ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ 4 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶ ನೀಡಿರುವುದನ್ನು ಖಂಡಿಸಿ ನಗರದಲ್ಲಿ ರೈತರು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಜೆ.ಸಿ. ವೃತ್ತದಲ್ಲಿ ರೈತರು ಮತ್ತು ವಿವಿಧ ಸಂಘಟನೆಗಳ ಕಾರ‌್ಯಕರ್ತರು ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿ ವಿನೂತನ ಪ್ರತಿಭಟನೆ ನಡೆಸಿದರೆ, ಕನ್ನಡ ಮತ್ತು ಪ್ರಗತಿಪರ ಸಂಘಟನೆಗಳು ಒಣಗಿದ ಕಬ್ಬಿನ ಕಂತೆಗಳನ್ನು ಹಿಡಿದು ಪ್ರತಿಭಟಿಸಿದರು. … Continue reading ‘ನಮ್ಮ ನೀರು, ನಮ್ಮ ಹಕ್ಕು’: ಕಾವೇರಿ ಆದೇಶದ ವಿರುದ್ಧ ಮಂಡ್ಯದಲ್ಲಿ ಹೋರಾಟ