ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೇನಾದಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ಸೇನೆ ನಮ್ಮದು ಎಂದು ಹೇಳಿದ್ದಾರೆ.
ಟ್ವೀಟ್ ಮೂಲಕ ಸೇನಾ ದಿನಾಚರಣೆಯ ಶುಭಕೋರಿದ ಪ್ರಧಾನಿ ಮೋದಿ, ನಾನು ಎಲ್ಲಾ ಸೇನಾ ಸಿಬ್ಬಂದಿ, ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯ ತಿಳಿಸುತ್ತೇನೆ. ಪ್ರತಿಯೊಬ್ಬ ಭಾರತೀಯನಿಗೂ ನಮ್ಮ ಸೇನೆ ಬಗ್ಗೆ ಹೆಮ್ಮೆ ಇದೆ, ನಾವು ಸದಾ ಕೃತಜ್ಞರಾಗಿದ್ದೇವೆ ಎಂದಿದ್ದಾರೆ.