ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 349 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಐವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,336ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 324 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,33,421ಕ್ಕೆ ಏರಿಕೆಯಾಗಿದೆ. ಇನ್ನು 5824 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 118 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.