ರಾಜ್ಯದಲ್ಲಿ 525 ಜನರಿಗೆ ಕೊರೋನಾ ಪಾಸಿಟಿವ್, 228 ಮಂದಿ ಗುಣಮುಖ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇಂದು 525 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ಶೇ.2.31 ರಷ್ಟು ಪಾಸಿಟಿವಿಟಿ ದರ ಇದೆ. ಇಂದು ಆಸ್ಪತ್ರೆಯಿಂದ 228 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬಳ್ಳಾರಿ 04, ಬೆಳಗಾವಿ 02, ಚಿತ್ರದುರ್ಗ 02, ದಕ್ಷಿಣ ಕನ್ನಡ 07, ಹಾಸನ 02, ಮೈಸೂರು 08 ಮತ್ತು ಉಡುಪಿ ಜಿಲ್ಲೆಯಲ್ಲಿ ಮೂವರು, ಬೆಂಗಳೂರು ನಗರವೊಂದರಲ್ಲೇ 494 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸೋಂಕಿತರ ಸಂಖ್ಯೆ 3955309ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 228 ಮಂದಿ ಸೇರಿದಂತೆ 3912024 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗ 3,177 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!