ಕಂಟ್ರೋಲ್ ಗೆ ಬಾರದ ವಾಯು ಮಾಲಿನ್ಯ: ದೆಹಲಿ, ಪಂಜಾಬ್, ಹರಿಯಾಣ, ಯುಪಿ,ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ಹೆಚ್ಚಳ ಪ್ರತಿ ವರ್ಷದ ಸಮಸ್ಯೆಯಾಗಿದ್ದು, ಹೀಗಾಗಿ ಇದಕ್ಕೆ ಸೂಕ್ತ ಪರಿಹಾರವೇನು? ಎಂದು ಸುಪ್ರೀಂ ಕೋರ್ಟ್ (Supreme Court) ಇಂದು ಪ್ರಶ್ನೆ ಮಾಡಿದೆ.

ದೆಹಲಿ ಮಾಲಿನ್ಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ ದೆಹಲಿ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರ್ಕಾರಕ್ಕೆ (Rajasthan Government) ಚಾಟೀ ಬೀಸಿದೆ.

ವಾಯುಮಾಲಿನ್ಯ ಸಮಸ್ಯೆಯನ್ನು ರಾಜಕೀಯ ಚರ್ಚೆಯಾಗಿ ಪರಿವರ್ತಿಸಲು ಸಾಧ್ಯವಿಲ್ಲ,ಇಲ್ಲಿ ಮಕ್ಕಳು ಮಾಲಿನ್ಯದಿಂದಾಗಿ ಆರೋಗ್ಯ ಸಮಸ್ಯೆ (Health Problem) ಎದುರಿಸುತ್ತಿದ್ದಾರೆ, ಕೂಡಲೇ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಸಬೇಕು ಮತ್ತು ಶುಕ್ರವಾರದೊಳಗೆ ಪರಿಸ್ಥಿತಿ ಸುಧಾರಣೆಗೆ ಕ್ರಮವಹಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಪಂಜಾಬ್ ಎ‌ಜಿ ಮಾಹಿತಿ ನೀಡುತ್ತಾ ,ಕೃಷಿ ತಾಜ್ಯ ಅಥವಾ ಹುಲ್ಲು ಸುಡುವಿಕೆ 20-50 ದಿನಗಳವರೆಗೆ ಮಾತ್ರ ಸಂಭವಿಸುತ್ತದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೀವು ಅದನ್ನು ಹೇಗೆ ಮಾಡುತ್ತೀರಿ ಎಂಬುದರ ಬಗ್ಗೆ ನಮಗೆ ಬೇಕಾಗಿಲ್ಲ, ಹುಲ್ಲು ಸುಡುವುದು ಕೂಡಲೇ ನಿಲ್ಲಬೇಕು, ಎಲ್ಲ ರಾಜ್ಯಗಳು ಬೆಂಕಿಯನ್ನು ನಿಲ್ಲಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ. ನಿಮ್ಮ ಸ್ಥಳೀಯ ಠಾಣೆಯ ಎಸ್‌ಎಚ್‌ಒ ಸಹ ಇದಕ್ಕೆ ಜವಾಬ್ದಾರಿಯಾಗಿರಬೇಕು. ಇಂದಿನಿಂದ ಅವರು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ತಾಕೀತು ಮಾಡಿತು.

ಅಮಿಕಸ್ ಕ್ಯೂರಿ ಅಪರಾಜಿತಾ ಸಿಂಗ್ ವಾದಿಸಿ, ದೆಹಲಿಯಲ್ಲಿ ಸ್ಥಾಪಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಹಿಂದಿನ ನಿರ್ದೇಶನಗಳ ನಂತರ ಅಳವಡಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ನಾವು ಟವರ್‌ಗಳು ಕಾರ್ಯನಿರ್ವವಂತೆ ಮಾಡಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿತು.

ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದ ಪೀಠ, ದೆಹಲಿ ಸರ್ಕಾರದ ಮಾಲಿನ್ಯ ನಿಯಂತ್ರಣ ಕ್ರಮಗಳು, ಅದರಲ್ಲೂ ವಿಶೇಷವಾಗಿ ಬೆಸ-ಸಮ ಯೋಜನೆಗೆ ಎಂದಾದರೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆಯೇ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ದೀಪಾವಳಿಯ ನಂತರ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ಈ ಯೋಜನೆ ಎಂದಾದರೂ ಯಶಸ್ವಿಯಾಗಿದಿಯೇ? ಎಂದು ಪ್ರಶ್ನಿಸಿತು.

ಶುಕ್ರವಾರ ವಿಚಾರಣೆ ಮುಂದುವರಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!