ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ತಾಯಿ, ಶಿಶು ಮರಣ ಪ್ರಮಾಣ, ಆತಂಕದಲ್ಲಿ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ತಾಯಿ, ಶಿಶು ಮರಣ ಪ್ರಮಾಣ ಹೆಚ್ಚಾಗಿದ್ದು, ಸರ್ಕಾರ ಆತಂಕದಲ್ಲಿದೆ.
ತಾಯಿ ಹಾಗೂ ಶಿಶು ಮರಣ ಪ್ರಮಾಣ ರಾಜ್ಯದಲ್ಲಿ ಗರಿಷ್ಠ ಮಟ್ಟದಲ್ಲಿದ್ದು, ನೆರೆಯ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮರಣ ಪ್ರಮಾಣ ಹೆಚ್ಚಾಗಿದೆ. ತಾಯಿ ಮತ್ತು ಶಿಶುವಿನ ಆರೈಕೆಗೆ ಸರ್ಕಾರ ಎಷ್ಟೋ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಸಿಕ್ಕಿಲ್ಲ.

ಆರೋಗ್ಯ ಕ್ಷೇತ್ರದಲ್ಲಿ ಮುಂದಿರುವ ರಾಜ್ಯಕ್ಕೆ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಳವಳ ಹುಟ್ಟಿಸುವಂತಿದೆ. ರಾಜ್ಯದಲ್ಲಿ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಒಟ್ಟಾರೆ 291 ತಾಯಿಯರು ಮೃತಪಟ್ಟಿದ್ದಾರೆ. ಒಟ್ಟಾರೆ 5,42,760 ಗರ್ಭಿಣಿಯರಲ್ಲಿ 529 ತಾಯಂದಿರು ರಕ್ತ ಹೀನತೆಯಿಂದ ಬಳಲಿದ್ದಾರೆ. ಇನ್ನು 38,846 ತಾಯಂದಿರು ಗರ್ಭಧಾರಣೆಯಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಕ್ತಸ್ರಾವ ತಾಯಂದಿರ ಮರಣಕ್ಕೆ ಪ್ರಮುಖ ಕಾರಣವಾಗಿದೆ. ಇನ್ನು ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಒಟ್ಟಾರೆ 4,838 ಶಿಶುಗಳು ಮರಣ ಹೊಂದಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!