Thursday, August 11, 2022

Latest Posts

ರಾಜ್ಯದಲ್ಲಿ ಇಂದು 622 ಮಂದಿಗೆ ಕೊರೋನಾ ಸೋಂಕು ದೃಢ, 351 ಮಂದಿ ಗುಣಮುಖ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 622 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,362ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 351 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,35,772ಕ್ಕೆ ಏರಿಕೆಯಾಗಿದೆ. ಇನ್ನು 6,862 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 115 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss