ರೇಪ್‌ ಕೇಸ್‌ನಲ್ಲಿ ಜಾಮೀನು ಪಡೆದು ಹೊರಬಂದ ಆರೋಪಿಯಿಂದ ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರ

ಹೊಸಗಂತ ಡಿಜಿಟಲ್‌ ಡೆಸ್ಕ್‌ 
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಆರೋಪಿ ಅದೇ ಯುವತಿಯ ಮೇಲೆ ಮತ್ತೊಮ್ಮೆ ಅತ್ಯಾಚಾರ ಎಸಗಿದ ಹೀನ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ.
ಈಗ 19 ವರ್ಷ ವಯಸ್ಸಿನ ಯುವತಿ ಮೇಲೆ ಎರಡು ವರ್ಷಗಳ ಹಿಂದೆ ಇದೇ ಆರೋಪಿ 2020ರಲ್ಲಿ ಅತ್ಯಾಚಾರ ಎಸಗಿದ್ದ. ಇದೀಗ ಆತ ಮತ್ತೆ ಅತ್ಯಾಚಾರವೆಸಗಿ ಯುವತಿ ಹಿಂದೆ ಸಲ್ಲಿಸಿದ್ದ ದೂರನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾನೆ ಎಂದು ಜಬಲ್‌ಪುರ ಪೊಲೀಸರು ತಿಳಿಸಿದ್ದಾರೆ.
ಯುವತಿ ಸಲ್ಲಿಸಿದ ದೂರಿನ ಪ್ರಕಾರ, ಆರೋಪಿ ವಿವೇಕ್ ಪಟೇಲ್ ತನ್ನ ಸ್ನೇಹಿತನೊಂದಿಗೆ ಮನೆಗೆ ಬಲವಂತವಾಗಿ ನುಗ್ಗಿ ಸಾಮೂಹಿಕ ಅತ್ಯಾಚಾರವೆಸಗಿ ಅದನ್ನು ಚಿತ್ರೀಕರಿಸಿಕೊಂಡು ಹಿಂದಿನ ದೂರನ್ನು ಹಿಂಪಡೆಯದಿದ್ದರೆ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣ ದಾಖಲಾದ ನಂತರ ಪೊಲೀಸರು ಆರೋಪಿಗಳ ಪತ್ತೆಗೆ  ಶೋಧಕಾರ್ಯ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!