ಸಿಎಂ ವಿರುದ್ಧ ಭುಗಿಲೆದ್ದ ಆಕ್ರೋಶ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಖಂಡಿಸಿ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಒಂದೆಡೆ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ತಳ್ಳಾಟ, ನೂಕಾಟ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರತಿಭಟನಾಕಾರರ ವಾಹನ ಸೀಜ್ ಮಾಡಿದ ಪೊಲೀಸರು ವಾಹನದ ಸಮೇತ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!