ಹೊಸದಿಗಂತ ವರದಿ ಹುಬ್ಬಳ್ಳಿ:
ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ಭಯೋತ್ಪಾದಕರ ದಾಳಿ ಖಂಡಿಸಿ ಹಾಗೂ ಭಯೋತ್ಪಾದಕರುಗೆ ಉಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಇಲ್ಲಿಯ ವಿದ್ಯಾನಗರದ ಬಿವಿಬಿ ಕಾಲೇಕ್ ಎದುರಿಗೆ ಸಮಾವೇಶ ಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸರಪಳಿ ನಿರ್ಮಿಸಿ ಟಯರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಹಿಂದೂಗಳ ಗುರಿಯಾಗಿಸಿ ಹತ್ಯೆ ಮಾಡಿದ ಜಿಹಾದಿಗಳನ್ನು ಗುಂಡಿಕ್ಕಿ ಕೊಲೆ ಮಾಡಬೇಕು, ಬೇಕೆ ಬೇಕು ನ್ಯಾಯಬೇಕು, ಕಾಶ್ಮೀರ ಭಯೋತ್ಪಾದಕರ ಮುಕ್ತ ಮಾಡಬೇಕು ಎಂಬ ಘೋಷಣೆಗಳು ಮುಗಿಲು ಮುಟ್ಟಿದವು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನಾ ಕಾರ್ಯದರ್ಶಿ ಮಣಿಕಂಠ ಕಳಸ ಮಾತನಾಡಿ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಕೃತ್ಯ ನಿಜಕ್ಕೂ ಖಂಡನೀಯ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಾದ್ಯಂತ ಖಂಡಿಸುತ್ತಿದೆ ಎಂದರು.
ಹಿಂದೂಗಳನ್ನೇ ಗುರಿಯಾಗಿಸಿ ಭಯೋತ್ಪಾದಕ ಜಿಹಾದಿಗಳು ಹತ್ಯೆ ಮಾಡಿದ್ದಾರೆ. ಈ ಜಿಹಾದಿ ಶಕ್ತಿಗಳ ಹೆಡೆಮುರಿಕಟ್ಟುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಇವರನ್ನು ಗುಂಡಿಕ್ಕಿ ಕೊಲ್ಲಬೇಕು. ಜಮ್ಮು ಕಾಶ್ಮೀರವನ್ನು ಭಯೋತ್ಪಾದಕರ ಮುಕ್ತವಾಗಿಸಬೇಕು ಎಂದು ಆಗ್ರಹಿಸಿದರು.
ನಗರ ಘಟಕದ ಸಂಘಟನಾ ಕಾರ್ಯದರ್ಶಿ ಮೌನೇಶ ಗೌಡ, ಸಿದ್ಧಾರ್ಥ ಕೋರಿ, ವಿಜಯ ಕಲ್ಲೂರ, ನಾಗದತ್ತಾ, ದಾನೇಶ ಕಿತ್ತೂರ, ಸಂಜನಾ ಹಿರೇಮಠ, ರಕ್ಷಿತಾ, ಅರ್ಚಿತಾ, ರಾಜೇಶ ಹಾಗೂ ಮಲ್ಲಿಕಾರ್ಜುನ ಇದ್ದರು.