Monday, October 13, 2025

ಆರ್‌ಎಸ್ಎಸ್ ಚಟುವಟಿಕೆ ನಿರ್ಬಂಧ ಹೇಳಿಕೆಗೆ ಆಕ್ರೋಶ: ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ( RSS) ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ಇದೀಗ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಯಾಂಕ್ ಖರ್ಗೆ , ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ಧಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ. ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.

ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್‌ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್‌ಎಸ್ಎಸ್‌ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

error: Content is protected !!