ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರೆಗಾಗಿ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂರು ಬಸ್‌ಗಳು ಹಾನಿಗೊಳಗಾಗಿವೆ.