ಎಚ್ಚರಿಕೆಯ ಗಂಟೆ ಬಾರಿಸಿದೆ ಕೋವಿಡ್: ರಾಜ್ಯದಲ್ಲಿ ಸಾವಿರದ ಗಡಿ ದಾಟಿದ ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ‌ ದಿನೇ ದಿನೇ ಏರಿಕೆ‌ ಕಂಡುಬರುತ್ತಿದ್ದು  ರಾಜ್ಯದಲ್ಲಿ   ಒಂದೇ ದಿನ ಸಾವಿರಕ್ಕೂ ಅಧಿಕ ಪ್ರಕರಣಗಳು ಕಂಡು ಬಂದಿದ್ದು ಆತಂಕ ಸೃಷ್ಟಿಸುವಂತಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ  ಒಟ್ಟೂ 1,073 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬಂದಿದೆ. ರಾಜ್ಯದಲ್ಲಿ ಒಟ್ಟೂ 6,134 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು  ಇಲ್ಲಿಯವರೆಗೆ ಒಟ್ಟೂ  39,70,484  ಜನರು ಸೋಂಕಿಗೆ ತುತ್ತಾಗಿದ್ದಾರೆ. ಪಾಸಿಟಿವಿಟಿ ದರವು 4.19% ದಷ್ಟಿದೆ.

ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದು ಇಲ್ಲಿಯವರೆಗೆ ಒಟ್ಟೂ 40,076  ಮಂದಿ ಸೋಂಕಿಗೆ ತುತ್ತಾಗಿದ್ದಾರೆ‌.

ಕಳೆದ 24 ಗಂಟೆಗಳಲ್ಲಿ 834 ಮಂದಿ ಚೇತರಿಸಿಕೊಂಡಿದ್ದು ಇಲ್ಲಿಯವರೆಗೆ  ಒಟ್ಟೂ 39,24,232 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!