Friday, August 19, 2022

Latest Posts

ಕಳೆದ 24 ಗಂಟೆಯಲ್ಲಿ 20 ಲಕ್ಷ ಮಂದಿಗೆ ಕೊರೊನಾ ಲಸಿಕೆ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20 ಲಕ್ಷ ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಇದುವರೆಗೆ ಒಂದು ದಿನದಲ್ಲಿ ಲಸಿಕೆ ಪಡೆದವರ ಅತಿ ಹೆಚ್ಚು ಸಂಖ್ಯೆಯಾಗಿದೆ.20,19,723 ಡೋಸ್ ಲಸಿಕೆಯನ್ನು ನೀಡಲಾಗಿದೆ.
ದೇಶದಾದ್ಯಂತ ಕಳೆದ ಜನವರಿ 16ರಿಂದ ಪ್ರಾರಂಭವಾದ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದ್ದು, ಒಂದೇ ದಿನದಲ್ಲಿ 2 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ನೀಡಲಾಯಿತು ಎಂದು ಸಚಿವಾಲಯ ತಿಳಿಸಿದೆ.
ಈವರೆಗೆ 2 ಕೋಟಿ 30 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ 19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಈ ಮಧ್ಯೆ, ಮಹಾರಾಷ್ಟ್ರ, ಕೇರಳ, ಪಂಜಾಬ್, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ಮತ್ತೆ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂದು ದೇಶದಲ್ಲಿ 15,388 ಹೊಸ ಪ್ರಕರಣಗಳು ವರದಿಯಾಗಿವೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,388 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,12,44,786ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ ಮಹಾಮಾರಿ ವೈರಸ್ ಗೆ 77 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 1,57,930ಕ್ಕೆ ಏರಿದೆ. ಈ ನಡುವೆ ನಿನ್ನೆ ಒಂದೇ ದಿನ 16, 596 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು ಈ ಮೂಲಕ ಇದುವರೆಗೆ ಒಟ್ಟೂ 1,08,99,394 ಜನರು ಸೋಂಕಿನಿಂದ ಗುಣ ಹೊಂದಿದ್ದಾರೆ. ಇದೀಗ ಪ್ರಸ್ತುತ 1,87,462 ಮಂದಿ ದೇಶದ ನಾನಾ ನಿಗದಿತ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!