ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್‌ನ ವಿವಿಧ ನಗರಗಳ ಮೇಲೆ ರಷ್ಯಾ ಮಿಲಿಟರಿ ದಾಳಿ ನಡೆಯುತ್ತಿದ್ದು, ಈ ವರೆಗೆ ದಾಳಿಯಿಂದ ಎರಡು ಸಾವಿರಕ್ಕೂ ಹೆಚ್ಚು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉಕ್ರೇನ್ ತುರ್ತು ಸೇವಾ ವಿಭಾಗ ಮಹತ್ವದ ಮಾಹಿತಿ ಹಂಚಿಕೊಂಡಿದೆ.
ಈಗಾಗಲೇ ರಷ್ಯಾ ದಾಳಿಗೆ ಉಕ್ರೇನ್‌ನ ಸಾರಿಗೆ ಸೌಲಭ್ಯಗಳು, ಆಸ್ಪತ್ರೆಗಳು, ಶಿಶು ವಿಹಾರ, ವಸತಿ ಕಟ್ಟಡಗಳು ಸಂಪೂರ್ಣವಾಗಿ ನೆಲಸಮವಾಗಿದ್ದು, ಬಾಂಬ್, ಶೆಲ್ ದಾಳಿಯಿಂದ ಮಕ್ಕಳು, ಮಹಿಳೆಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದೆ.
ಮತ್ತೊಂದೆಡೆ, ಆರು ದಿನಗಳಲ್ಲಿ ಸುಮಾರು 6,000 ರಷ್ಯಾ ಸೈನಿಕರನ್ನು ಹತ್ಯೆ ಮಾಡಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ.