Monday, March 27, 2023

Latest Posts

ಟರ್ಕಿಯಲ್ಲಿ ಭೂಕಂಪ ಪೆರುವಿನಲ್ಲಿ ಭೂಕುಸಿತ: ನೈಸರ್ಗಿಕ ವಿಕೋಪಕ್ಕೆ 36ಮಂದಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟರ್ಕಿ-ಸಿರಿಯಾದಲ್ಲಿ ಭೂಕಂಪದಿಂದ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿರುವಾಗಲೇ ದಕ್ಷಿಣ ಅಮೆರಿಕದ ಪೆರುವಿನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು 36 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಪೆರುವಿನ ದಕ್ಷಿಣ ಪ್ರದೇಶದ ಕ್ಯಾಮಾನಾ ಪ್ರಾಂತ್ಯದಲ್ಲಿ ಇತ್ತೀಚೆಗೆ ಭಾರೀ ಮಳೆ ಬೀಳುತ್ತಿದೆ.

ಬೆಟ್ಟದ ತಪ್ಪಲಿನ ಗ್ರಾಮಗಳು ಭಾರೀ ಹಾನಿ ಅನುಭವಿಸುತ್ತಿವೆ. ದೊಡ್ಡ ಕಲ್ಲು, ಮಣ್ಣು ಬಿದ್ದು ಹಲವರು ಸಾವನ್ನಪ್ಪುತ್ತಿದ್ದಾರೆ. ಮನೆಗಳು ನೆಲಸಮವಾಗುತ್ತಿದ್ದು, ಬೆಟ್ಟದ ಕೆಳಭಾಗದ ರಸ್ತೆಗಳು ಹೆಪ್ಪುಗಟ್ಟಿವೆ. ಮಣ್ಣು, ಕಲ್ಲುಗಳು ಶೇಖರಣೆಯಾಗಿ ಕಿಲೋಮೀಟರ್ ಗಟ್ಟಲೆ ಸಾರಿಗೆ ಸಂಚಾರ ಸ್ಥಗಿತಗೊಂಡಿದೆ. ಸೋಮವಾರ ರಸ್ತೆಯೊಂದರಲ್ಲಿ ಐವರು ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬಂಡೆಯೊಂದು ಬಿದ್ದಿದೆ. ಬೆಟ್ಟದ ಮೇಲಿಂದ ಬಿದ್ದ ಮಣ್ಣು ವಾಹನವನ್ನು ಸಮೀಪದ ನದಿಗೆ ತಳ್ಳಿದೆ. ಘಟನೆಯಲ್ಲಿ ವ್ಯಾನ್‌ನಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಭೂಕುಸಿತ ಪೀಡಿತ ಪ್ರದೇಶದಲ್ಲಿ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಹಲವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಧಿಕಾರಿಗಳ ಅಂದಾಜಿನ ಪ್ರಕಾರ, ಇದುವರೆಗೆ 650 ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಬೆಟ್ಟದ ಕೆಳಭಾಗದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ತಾತ್ಕಾಲಿಕ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಹೆಲಿಕಾಪ್ಟರ್‌ಗಳ ಮೂಲಕ ಜನರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ಮಟ್ಟದಲ್ಲಿ ಭೂಕುಸಿತ ಸಂಭವಿಸಿರುವುದು ಇದೇ ಮೊದಲು ಎಂದು ಅಧಿಕಾರಿಗಳು ಹೇಳುತ್ತಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!