78 ಸಾವಿರ ಭಾರತೀಯರಿಂದ ಏಕಕಾಲದಲ್ಲಿ ರಾಷ್ಟ್ರಧ್ವಜ ಹಾರಾಟ; ಪಾಕ್ ವಿಶ್ವದಾಖಲೆ ಬ್ರೇಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಿಹಾರದ ಭೋಜ್‌ಪುರದಲ್ಲಿ 78 ಸಾವಿರ ಭಾರತೀಯರು ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಪಾಕಿಸ್ತಾನದ 18 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ 78,000 ಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಹೊದ ದಾಖಲೆಯನ್ನು ಬರೆದರು.
ಬ್ರಿಟಿಷರ ವಿರುದ್ಧ 1857ರ ನಡೆದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರರಲ್ಲಿ ಒಬ್ಬರಾದ ವೀರ್ ಕುನ್ವರ್ ಸಿಂಗ್ ಅವರ 164 ನೇ ಪುಣ್ಯತಿಥಿ ಪ್ರಯುಕ್ತ ಆಯೋಜಿಸಿದ್ದ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಹಾರದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಕೇಂದ್ರ ಸಚಿವ ಆರ್.ಕೆ.ಸಿಂಗ್, ನಿತ್ಯಾನಂದ ರೈ, ಬಿಹಾರದ ಉಪಮುಖ್ಯಮಂತ್ರಿ ತಾರಾಕಿಶೋರ್ ಪ್ರಸಾದ್, ರೇಣು ದೇವಿ, ಸುಶೀಲ್ ಕುಮಾರ್ ಮೋದಿ ಸೇರಿದಂತೆ ಅಪಾರ ಜನರು ʼಒಂದೇ ಮಾತರಂʼ ಗೀತೆ ಮೊಳಗಿದ ಪೂರ್ಣ ಐದು ನಿಮಿಷಗಳ ಕಾಲ ತ್ರಿವರ್ಣ ಧ್ವಜವನ್ನು ಹಾರಿಸಿದರು.

ಅಮಿತ್ ಶಾ ಸಮ್ಮುಖದಲ್ಲಿ ಏಕಕಾಲಕ್ಕೆ 75000 ತ್ರಿವರ್ಣ ಧ್ವಜ ಹಾರಿಸುವ ಗುರಿಯನ್ನು ಬಿಜೆಪಿ ಹೊಂದಿತ್ತು. 2004ರಲ್ಲಿ ಲಾಹೋರ್‌ನಲ್ಲಿ ನಡೆದ ಸಮಾರಂಭದಲ್ಲಿ 56,000 ಪಾಕಿಸ್ತಾನಿಗಳು ತಮ್ಮ ರಾಷ್ಟ್ರಧ್ವಜವನ್ನು ಬೀಸಿದ್ದು ಈವರೆಗಿನ ವಿಶ್ವದಾಖಲೆಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!