Friday, March 31, 2023

Latest Posts

ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧ: ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ 8,600 ಜನೌಷಧಿ ಕೇಂದ್ರಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಈವರೆಗೆ ಸುಮಾರು 8,600 ಜನ್‌ ಔಷಧ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಕ್‌ ಮಾಂಡವಿಯಾ ತಿಳಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಜನ್‌ ಔಷಧಿ ಜಾಗರಣ ಅಭಿಯಾನದಲ್ಲಿ ಮಾತನಾಡಿದ ಅವರು, ಮಾ.1ರಿಂದ ಮಾ.7ರವರೆಗೆ ಜನೌಷಧಿ ವಾರವಾಗಿ ಆಚರಿಸುತ್ತೇವೆ. ಈವರೆಗೆ ದೇಶದ ಜನತೆಗೆ ಗುಣಮಟ್ಟದ ಔಷಧಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈವರೆಗೆ ಸುಮಾರು 8,600 ಕೇಂದ್ರಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಿದ್ದಾರೆ.
ಇಂದು ದೇಶಾದ್ಯಂತ ಜನೌಷಧಿ ದಿನಸ್‌ ಎಂದು ಆಚರಿಸಲಾಗುತ್ತಿದೆ. ಈ ಮೂಲಕ ಜನರಿಗೆ ಜನೌಷಧಿ ಕೇಂದ್ರ ಹಾಗೂ ಅದರ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!