Monday, August 15, 2022

Latest Posts

ದೇಶದಲ್ಲಿ 9 ಲಕ್ಷ ಕೊರೋನಾ ಸೋಂಕಿತರು ಆಮ್ಲಜನಕ, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ಸಚಿವ ಹರ್ಷವರ್ಧನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ 9 ಲಕ್ಷ ಮಂದಿ ಕೊರೋನಾ ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ,ಒಟ್ಟು 4,88,861 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಶನಿವಾರ ತಿಳಿಸಿದ್ದಾರೆ.
ಸಾಂಕ್ರಾಮಿಕ ಪರಿಸ್ಥಿತಿ ಕುರಿತು ಚರ್ಚಿಸಲು ಸಚಿವರ ತಂಡ(ಜಿಒಎಂ)ದ 25ನೇ ವರ್ಚುವಲ್ ಸಭೆ ಉದ್ದೇಶಿಸಿ ಮಾತನಾಡಿದ ಹರ್ಷವರ್ಧನ್ ಅವರು, ದೇಶಾದ್ಯಂತ ಶೇ. 1.34 ರಷ್ಟು ಕೋವಿಡ್ ಸೋಂಕಿತರು ಐಸಿಯುನಲ್ಲಿದ್ದಾರೆ, ಶೇ.0.39 ರಷ್ಟು ಪ್ರಕರಣಗಳು ವೆಂಟಿಲೇಟರ್ ಮತ್ತು ಶೇ. 3.70 ಕೋವಿಡ್ ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಹೇಳಿದರು.
ವಿದೇಶಾಂಗ ಸಚಿವ ಎಸ್.ಜೈಶಂಕರ್, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ, ಬಂದರು, ಹಡಗು ಮತ್ತು ಜಲಮಾರ್ಗ ಮತ್ತು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ರಾಜ್ಯ ಸಚಿವರು, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ. ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ಸದಸ್ಯ ವಿನೋದ್ ಕೆ ಪೌಲ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss