ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆದ್ದಾರಿಗಳಲ್ಲಿ ಗಂಟೆಗೆ 130 ಕಿಮೀ ವೇಗದ ಮಿತಿಯನ್ನು ಮೀರಿ ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದ್ದರೂ, ನಿಯಮ ಮೀರಿ ಓವರ್ ಸ್ಪೀಡಿಂಗ್ ಮಾಡಿದ 76 ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ.
ರೂಲ್ಸ್ ಹಾಕಿದ ಕೆಲವೇ ದಿನಗಳಲ್ಲಿ ಕರ್ನಾಟಕ ಪೊಲೀಸರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ 76 ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಆಗಸ್ಟ್ 1 ಮತ್ತು 2ರಂದು ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ 76 ಚಾಲಕರ ವಿರುದ್ಧ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಆಗಸ್ಟ್ 1 ಮತ್ತು 2ರಂದು ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಆಗಸ್ಟ್ 1ರಿಂದ ಹೊಸ ನಿಯಮ ಜಾರಿಗೆ ಬಂದಿತ್ತು.