ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ ಸುರೇಶ್ ನಮ್ಮಲ್ಲಿ ಆತ್ಮವಿಶ್ವಾಸ ಜಾಸ್ತಿ ಇದೆ, ಅದನ್ನು ಬಿಟ್ಟು ಕೆಲಸದಲ್ಲಿ ನಂಬಿಕೆ ಇಡಬೇಕು ಎಂದು ಆತ್ಮಾವಲೋಕನ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಮುಡಾ ಪ್ರಕರಣವೇ ಕಾರಣ ಎಂಬ ಮಾಹಿ ಸ್ಪೀಕರ್ ಕೋಳಿವಾಡ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.
ಇದು ಜನರ ತೀರ್ಪು, ಹರಿಯಾಣದಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಫಲಿತಾಂಶವೇ ಬೇರೆ, ವಿಧಾನಸಭೆ ಚುನಾವಣೆ ಫಲಿತಾಂಶವೇ ಬೇರೆ. ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ನಾವು ಕೆಲಸವನ್ನು ನಂಬಬೇಕು ಎಂಬುದನ್ನು ಹೊರತುಪಡಿಸಿ ನಾವು ಅತಿಯಾದ ಆತ್ಮವಿಶ್ವಾಸ ಹೊಂದಿದ್ದೇವೆ ಎಂದು ಅವರು ಹೇಳಿದರು.