ಹೊಸದಿಗಂತ, ಕಾರವಾರ
ಉತ್ತರಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಭಟ್ಕಳದಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರ ಗಸ್ತು ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಎಸ್ಪಿ ಸುಮನ್ ಪೆನ್ನೇಕರ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಸುಮಾ ಬಿ. ನೇತೃತ್ವದಲ್ಲಿ ರಸ್ತೆಗೆ ಇಳಿದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಆಯಕಟ್ಟಿನ ಸ್ಥಳಗಳಲ್ಲಿ ನಿಂತು ವಾಹನ ತಪಾಸಣೆ ನಡೆಸಿದರು. ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನು ನಡೆಸಿದರು. ಬುಧವಾರ ನಸುಕಿನ ವೇಳೆ 5 ಗಂಟೆಯವರೆಗೂ ನಿದ್ದೆ ಬಿಟ್ಟು ಭಟ್ಕಳ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸುವ ಮೂಲಕ ಗಮನ ಸೆಳೆದರು. ಪುರುಷ ಪೇದೆಗಳಿಗೆ ತಾವೇನೂ ಕಡಿಮೆ ಇಲ್ಲ ಎನ್ನುವುದನ್ನು ಸಾಬೀತು ಮಾಡಿದರು.
ಮಹಿಳಾ ಪೇದೆಗಳ ಕರ್ತವ್ಯ ದಕ್ಷತೆ ಸಾರ್ವಜನಿಕರ ಶ್ಲಾಘನೆಗೆ ಒಳಗಾಗಿದೆ.