ಬೆಂಗಳೂರಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಮುಂದಿನ 24 ಗಂಟೆ ರಾಜ್ಯಾದ್ಯಂತ ವರ್ಷಧಾರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಹೊಸಕೆರೆಹಳ್ಳಿಯ ಕೆರೆ ಉಕ್ಕಿ ಹರಿದು, ಕೋಡಿ ಒಡೆದು ಮನೆಗಳಿಗೆ ನೀರು ನುಗ್ಗಿದೆ.

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಲಾವೃತಗೊಂಡಿದ್ದು,ಬಿಬಿಎಂಪಿ ಸಿಬ್ಬಂದಿ ಅವುಗಳನ್ನು ತೆರವುಗೊಳಿಸಿದ್ದಾರೆ. ಬೆಂಗಳೂರು, ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಎಲ್ಲಕಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಸಿಂದಗಿ, ಚಿಕ್ಕಮಗಳೂರು, ಹುಕ್ಕೇರಿ, ಶಿವಮೊಗ್ಗ, ಕಲಬುರಗಿ, ಚಿಂತಾಮಣಿ, ಬಿಳಗಿ, ಗೋಕಾಕ್ ಹಾಗೂ ಕೋಲಾರದಲ್ಲಿ ನಿನ್ನೆ ಜೋರು ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ ಮಳೆಯ ವಾತಾವರಣವಷ್ಟೇ ಇರಲಿದ್ದು, ಸಂಜೆ ವೇಳೆಗೆ ಮಳೆ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಸಮುದ್ರತೀರದಲ್ಲಿ ಮೋಚಾ ಚಂಡಮಾರುತ ಅಪ್ಪಳಿಸುವುದರಿಂದ ಕರ್ನಾಟಕದ ಮೇಲೂ ಮೋಚಾ ಪ್ರಭಾವ ಬೀರಲಿದೆ.

ಮೇ.12ರವರೆಗೂ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!