ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ವೆಲೆನ್ಸಿಯಾದಲ್ಲಿ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದಿರುವ ಘಟನೆ ಶುಕ್ರವಾರ ನಡೆದಿದೆ.
ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆಡಿದ್ದು, ಇದರಿಂದ ಮೊಟ್ಟೆ ಸಾಗಾಟದ ವಾಹನ ಸುಮಾರು 15 ಅಡಿಗಳಷ್ಟು ದೂರ ತಳ್ಳಲ್ಪಟ್ಟಿದ್ದು, ಮೊಟ್ಟೆಗಳೆಲ್ಲ ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ.
ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಒಟ್ಟೊಟ್ಟಿಗೆ ಬಂದಿದ್ದು, ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಸಿಟಿ ಬಸ್ ಓವರ್ ಟೇಕ್ ಮಾಡಲು ಮುಂದಾಗಿದ್ದು, ಈ ವೇಳೆ ಬಸ್, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಅಂಗಡಿಗೆ ಮೊಟ್ಟೆ ಪೂರೈಕೆ ಮಾಡುತ್ತಿದ್ದ ವಾಹನಕ್ಕೆಡಿಕ್ಕಿ ಹೊಡೆದಿದೆ.