ಹೊಸ ದಿಗಂತ ವರದಿ, ಮಂಗಳೂರು :
ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಉಳಿಯಾರಗೋಳಿ ಎಂಬಲ್ಲಿ ಖಾಸಗಿ ಬಸ್ ಓವರ್ ಟೇಕ್ ಭರಾಟೆಯಲ್ಲಿ ಪಲ್ಟಿಯಾದ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು, ಸರಕಾರಿ ಬಸ್ಸನ್ನು ಓವರ್ ಟೆಕ್ ಮಾಡುವ ಧಾವಂತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಪಲ್ಟಿಯಾಗಿದೆ. ಮಗುಚಿ ಬಿದ್ದಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಬಸ್ಸಿನಿಂದ ಹೊರಗೆ ತರುವಲ್ಲಿ ಶ್ರಮಿಸಿದ್ದಾರೆ.
ಗಾಯಾಳುಗಳನ್ನು ಉಡುಪಿ ಮತ್ತು ಕಾಪುವಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.