ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರದಲ್ಲಿ ಬೈಕ್, ಕಾರು ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮೃತ ಬೈಕ್ ಸವಾರನನ್ನು ಚಂದ್ರಶೇಖರ್ (50) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರಗೆ ಕಾಲು ಮುರಿದಿದ್ದು, ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಳಿಕ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.