ಓವರ್ ಟೇಕ್ ಭರದಲ್ಲಿ ಡಿವೈಡರ್ ಮೇಲೇರಿದ ಬಸ್: ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಸಮಿಪದ ಮೂಳೂರು ಬಳಿ ಎರಡು ಬಸ್ಸುಗಳ ಓವರ್ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ಒಂದೇ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ. ಘಟನೆಯಿಂದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಾಪು ಪೋಲಿಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!